ಕರ್ನಾಟಕದ ಕೆಲವು ಜಿಲ್ಲೆಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿ ನಕ್ಷೆಯನ್ನು ಹರಿಬಿಟ್ಟ MES ಪುಂಡರು
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ MES ಪುಂಡರು ಮತ್ತೆ ತೆಗಾದೆ ತೆಗೆದಿದ್ದು, MESನ ಮುಖಂಡ ಶುಭಂ ಶೆಳಕೆ ಸಂಯುಕ್ತ ಮಹಾರಾಷ್ಟ್ರ ಪರಿಕಲ್ಪನೆಯ ನಕ್ಷೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಗಡಿ ವಿವಾದವನ್ನು ಕೆಣಕಿದ್ದಾರೆ. .
ಪೋಸ್ಟ್ ನಲ್ಲಿ ಶುಭಂ ಶೆಳಕೆ ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ಗ್ರಾಫಿಕ್ ನಕ್ಷೆಯನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡುವ ಮೂಲಕ ಗಡಿ ವಿವಾದ ಸೃಷ್ಟಿಸಿದ್ದಾರೆ.
ವಿಡಿಯೋ ಜೊತೆಗೆ ಮಹಾರಾಷ್ಟ್ರವಾದಿಗಳೇ ನಮಗೆ ಮನಃಪೂರ್ವಕವಾಗಿ ಮಹಾರಾಷ್ಟ್ರ ದಿನಕ್ಕೆ ಶುಭಕೋರಲು ಆಗುತ್ತಿಲ್ಲ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ವೀಡಿಯೋ ಜೊತೆ ಪೋಸ್ಟ್ ಮಾಡಿದ್ದಾರೆ.