ಬೆಂಗಳೂರು: ಮುಂದಿನ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವುದಕ್ಕಾಗಿ ಮೊಬೈಲ್ ಗೆ ಸದ್ಯ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶ (Flash Message To Mobile) ಬಂದಿದೆ.
ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಕುರಿತು ಎರಡು ದಿಗಳಿಂದ ಸಂದೇಶಗಳು ಬರುತ್ತಿದ್ದವು. ಹೀಗಾಗಿ ಇಂದು ಕೂಡ ಇಂಗ್ಲಿಷ್ ಮತ್ತು ಕನ್ನಡದಲ್ಲಿ 2 ಬಾರಿ ಫ್ಲ್ಯಾಶ್ ಮೆಸೇಜ್ ಜೊತೆ ವಿಭಿನ್ನ ಶಬ್ದ ಕೂಡ ಮೊಬೈಲ್ ಗೆ ಬಂದಿದೆ.
ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ (Alert Test Message) ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶ ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶ ಕಳುಹಿಸಲಾಗಿದೆ. ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಅದರಲ್ಲಿ ತಿಳಿಸಲಾಗಿದೆ.