ಹೊಂಚು ಹಾಕಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅಂದರ್

1 min read
METAGALLI POLICE

ಹೊಂಚು ಹಾಕಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅಂದರ್

ಮೈಸೂರು : ಹೊಂಚು ಹಾಕಿ ಜನರಿಗೆ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗನ್ನ ಮೇಟಗಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಷ್ಣು, ಗಿರೀಶ್,ಅಜಿತ್ ಕುಮಾರ್ ಮತ್ತು ಯಶವಂತ್ ಬಂಧಿತ ಆರೋಪಿಗಳಾಗಿದ್ದಾರೆ.

ಈ ನಾಲ್ವರು ಮಾರ್ಚ್04 ರಂದು ಮೇಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವ್ಯಕ್ತಿಯನ್ನು ಅಡ್ಡಗಟ್ಟಿ ಆತನಿಂದ 28 ಸಾವಿರ ಹಣ, 25 ಗ್ರಾಂ ಚಿನ್ನ, ಒಂದು ಮೊಬೈಲ್ ಫೋನ್ ದೋಚಿ ಪರಾರಿಯಾಗಿದ್ದರು.

METAGALLI POLICE

ಈ ಸಂಬಂಧ ಆ ವ್ಯಕ್ತಿ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಬಂಧಿತರಿಂದ 2 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd