Heavy Rain Karnataka ರಾಜ್ಯಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯದಲ್ಲಿ ನಾಳೆಯವರೆಗೆ ಭಾರಿ ಮಳೆ
ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಮೈಸೂರು ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆರಾಯ ಆರ್ಭಟ ಶುರುವಾಗಿದ್ದು, ಇನ್ನೆರಡು ದಿನಗಳ ಮಳೆ ಮುಂದುವರೆಯಲಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಕೋಲಾರ, ಮೈಸೂರು ಸೇರಿದಂತೆ ಮೈಸೂರು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇನ್ನೆರಡು ದಿನಗಳು ಮಳೆ ಹೀಗೆ ಮುಂದುವರೆಲಿದೆ.

ಇತ್ತ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕಡಲ ತೀರಕ್ಕೆ ಮೀನುಗಾರರು ಹೋಗಬಾರದು ಎಂದು ಸೂಚನೆ ನೀಡಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ.
ಜೊತೆಗೆ ಆಗಾಗ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದು, ಗಂಗಾವಳಿ ನದಿಯಲ್ಲಿ ಲಾರಿ ತೇಲಿ ಹೋಗಿದೆ. ಯಾದಗಿರಿಯಲ್ಲೂ ಕೂಡ ವರುಣನ ಅಬ್ಬರ ಮುಂದುವರೆದಿದೆ.








