ನಾಳೆ ಬೆಳಿಗ್ಗೆ 7 ಗಂಟೆಯಿಂದ ಮತ್ತೆ ಮೆಟ್ರೋ ಸಂಚಾರ ಆರಂಭ
ಬೆಂಗಳೂರು: ಕೊರೊನಾ 2ನೇ ಅಲೆ ನಿವಾರಣೆಗೆ ರಾಜ್ಯ ಸರ್ಕಾರ ಹೇರಿದ್ದ ಲಾಕ್ ಡೌನ್ ಅನ್ನ ಸಡಿಲಿಕೆ ಮಾಡಿಕೊಂಡು ಬರುತ್ತಿದೆ.. ಈ ನಡುವೆ ಹೋಟೆಲ್ ಗಳಲ್ಲಿ ಕೇವಲ ಪಾರ್ಸಲ್ ಗೆ ಮಾತ್ರವೇ ಅವಕಾಶ ನೀಡಲಾಗಿತ್ತು.. ಅಲ್ಲದೇ ಹೋಟೆಲ್‍ನಲ್ಲಿ ನಾಳೆಯಿಂದ ಕೂತು ತಿನ್ನುವ ಅವಕಾಶಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ನೀಡಿತ್ತು..
ಇದರ ಬೆನ್ನಲ್ಲೇ ನಾಳೆ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರು ಬಿಎಂಆರ್ಸಿಎಲ್ , ನಾಳೆ ಬೆಳಗ್ಗೆ 7 ರಿಂದ ಮಧ್ಯಾಹ್ನ 11 ಗಂಟೆ ವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಾತ್ರ ಮೆಟ್ರೋ ಸಂಚಾರ ಇರಲಿದೆ. ಸ್ಮಾರ್ಟ್ ಕಾರ್ಡ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ಸಂಚಾರಿಸಲು ಅವಕಾಶವಿದ್ದು, ಎಲ್ಲಾ ನಿಲ್ದಾಣದಲ್ಲೂ ಸ್ಮಾರ್ಟ್ ಕಾರ್ಡ್ ರಿಚಾರ್ಜ್ಗೆ ವ್ಯವಸ್ಥೆ ಇರಲಿದೆ ಎಂದು ತಿಳಿಸಿದ್ದಾರೆ.
ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ ನಿಯಮ ಪಾಲಿಸಬೇಕು. ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸೇಷನ್ ಮೆಟ್ರೋ ನಿಲ್ದಾಣದಲ್ಲಿ ಕಡ್ಡಾಯವಾಗಿದ್ದು, ಪ್ರಯಾಣಿಕರು ಫೇಸ್ ಮಾಸ್ಕ್ ಧರಿಸಿದ್ದರೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಅಲ್ಲದೇ, ರೈಲಿನಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಿಎಂಆರ್ಸಿಎಲ್ ತಿಳಿಸಿವೆ. ಇನ್ನೂ ಇತ್ತೀಚೆಗೆ ಕೋಟೆಲ್ ಗಳಲ್ಲಿ ಶೇ.50 ರಷ್ಟು ಮಾತ್ರ ಟೇಬಲ್ ಸರ್ವಿಸ್‍ಗೆ ಅವಕಾಶ ನೀಡಿದೆ. ನಾಳೆಯಿಂದ ಟೇಬಲ್ ಸರ್ವಿಸ್ ನೀಡಲು ಹೋಟಲ್‍ಗಳು ಸಜ್ಜಾಗುತ್ತಿವೆ.
ಅಲ್ಲದೇ ಸಿಎಂ ಯಡಿಯೂರಪ್ಪನವರು ಸಿನಿಮಾರಂಗದವರಿಗೆ ಗುಡ್ ನ್ಯೂಸ್ ನೀಡಿದ್ದರು. ರಾಜ್ಯದಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೌದು ಜೂನ್ 21 ಅಂದ್ರೆ ಮುಂಬರುವ ಸೋಮವಾರದಿಂದ ರಾಜ್ಯದಲ್ಲಿ ಸಿನಿಮಾ, ಧಾರಾವಾಹಿ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣ ಮಾಡಬಹುದು ಎಂದು ಘೋಷಣೆ ಮಾಡಿದ್ದರು.. ಜೂನ್ 21 ರಿಂದ ಹೊರಾಂಗಣದಲ್ಲಿ ಶೂಟಿಂಗ್ ಮಾಡಬಹುದು, ಸೂಕ್ತ ಮುಂಜಾಗ್ರತೆ ಕ್ರಮ ಜರುಗಿಸಿಕೊಳ್ಳಬೇಕು ಎಂದು ಸಿಎಂ ಸೂಚನೆ ಕೊಟ್ಟಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








