ನಾಳೆ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ

1 min read
Metro traffic saaksha tv

ನಾಳೆ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು : ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ.

ಅಕ್ಟೋಬರ್ 9ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 10ರ ಬೆಳಗ್ಗೆ 6 ಗಂಟೆ ತನಕ ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ರದ್ದುಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಇಂದು ಈ ಕುರಿತು ಪ್ರಕಟಣೆ ಹೊರಡಿಸಿದೆ.

Metro traffic saaksha tv

ನಾಳೆ ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ಆರಂಭವಾಗಲಿದೆ.

 

ಈ ಹಿನ್ನೆಲೆಯಲ್ಲಿ ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಇರುವುದಿಲ್ಲ.

ಕಾಮಗಾರಿ ಪೂರ್ಣಗೊಂಡ ಬಳಿಕ ಅಕ್ಟೋಬರ್ 10ರ ಭಾನುವಾರ ಬೆಳಗ್ಗೆ 6 ಗಂಟೆ ಬಳಿಕ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd