MI vs DC Match | ಹೆಡ್ ಟು ಹೆಟ್ ರೆಕಾರ್ಡ್ ನಲ್ಲಿ ಯಾರಿಗೆ ಮೇಲು ಗೈ
15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ 69 ನೇ ಪಂದ್ಯ ಎರಡು ತಂಡಗಳ ಭವಿಷ್ಯ ಬರೆಯಲಿದೆ.
ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಎರಡೂ ತಂಡಗಳು ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಎದುರುಬದರಾಗುತ್ತಿವೆ.
ಈ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಬಳಗ, 13 ಪಂದ್ಯಗಳನ್ನಾಡಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದರೊಂದಿಗೆ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಇತ್ತ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಲ್ಲಿ 13 ಪಂದ್ಯಗಳನ್ನಾಡಿದೆ. ಈ ಪೈಕಿ ಏಳು ಪಂದ್ಯಗಳಲ್ಲಿ ಗೆದ್ದು, ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಕಳೆದ ಪಂದ್ಯಗಳ ರಿಸಲ್ಟ್ ಬಗ್ಗೆ ಮಾತನಾಡಿದ್ರೆ ಮುಂಬೈ ಇಂಡಿಯನ್ಸ್ ತಂಡ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೂರು ರನ್ ಗಳಿಂದ ಸೋಲು ಕಂಡಿದೆ. ಆದ್ರೂ ಈ ಮ್ಯಾಚ್ ನಲ್ಲಿ ರೋಹಿತ್ ಶರ್ಮಾ 48 ರನ್ ಮತ್ತು ಇಶಾನ್ ಕಿಶನ್ 43 ರನ್ ಗಳಿಸಿದ್ದರು.
ಮತ್ತೊಂದು ಕಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಿದ್ದು, 17 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮಿಚೆಲ್ ಮಾರ್ಷ್ 63 ರನ್, ಶರ್ದೂಲ್ ಠಾಕೂರ್ 4 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇನ್ನು ಕಳೆದ ಬಾರಿ ಎರಡೂ ತಂಡಗಳು ಮುಖಾಮುಖಿಯಾಗಿದ್ದಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ವಿರುದ್ಧ 4 ವಿಕೆಟ್ಗಳಿಂದ ಜಯ ಸಾಧಿಸಿದೆ.
ಹೆಡ್ ಟು ಹೆಡ್ ರೆಕಾರ್ಡ್ ನೋಡೋದಾದ್ರೆ..
ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಈ ಎರಡೂ ತಂಡಗಳು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳು ಸಮಬಲದ ಹೋರಾಟ ನಡೆಸಿವೆ. ಮುಂಬೈ ಇಂಡಿಯನ್ಸ್ 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೇ ಡೆಲ್ಲಿ ಕ್ಯಾಪಿಟಲ್ಸ್ ತಂಡ 15 ಪಂದ್ಯಗಳಲ್ಲಿ ಜಯ ಸಾಧಿಸಿದೆ. ವಾಂಖೇಡೆ ಮೈದಾನದಲ್ಲಿ ಈ ಎರಡೂ ತಂಡಗಳು ಎಂಟು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ 5 ಪಂದ್ಯಗಳಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಕಳೆದ ಐದು ಪಂದ್ಯಗಳ ವಿಚಾರಕ್ಕೆ ಬಂದರೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೇಲು ಗೈ ಸಾಧಿಸಿದೆ. ಮೂರು ಪಂದ್ಯದಲ್ಲಿ ಡೆಲ್ಲಿ ಗೆದ್ದರೇ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಈ ಸೀಸನ್ ನಲ್ಲಿ ಆಡಿದ ಒಂದು ಪಂದ್ಯದಲ್ಲಿ ಡೆಲ್ಲಿ ತಂಡ ಗೆದ್ದಿದೆ.
ಮೊದಲು ಬ್ಯಾಟಿಂಗ್ ಮಾಡಿದಾಗ ಮುಂಬೈ ಇಂಡಿಯನ್ಸ್ ತಂಡ ಹನ್ನೊಂದು ಪಂದ್ಯದಲ್ಲಿ ಗೆದ್ದರೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಚೇಸಿಂಗ್ ನಲ್ಲಿ ಡೆಲ್ಲಿ ತಂಡ 10 ಪಂದ್ಯಗಳಲ್ಲಿ ಗೆದ್ದಿದ್ದರೇ ಮುಂಬೈ ತಂಡ ಐದು ಪಂದ್ಯಗಳಲ್ಲಿ ಜಯ ಸಾಧಿಸಿದೆ. mi-vs-dc-match- Head-to-Head Records