MI vs LSG ಟಾಸ್ ಗೆದ್ದ ಮುಂಬೈ.. ಮೊದಲ ಗೆಲುವಿನ ನಿರೀಕ್ಷೆ
ಇಂಡಿಯನ್ ಪ್ರಿಮಿಯರ್ ಲೀಗ್ ನ 26 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಬ್ರೆಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದೆ.
ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡ ಐದು ಪಂದ್ಯಗಳನ್ನು ಸೋತಿದೆ. ಮುಂಬೈ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದು, ಫಾಬಿಯನ್ ಅಲೆನ್ ಪ್ಲೆಯಿಂಗ್ ಇಲೆವೆನ್ ನಲ್ಲಿ ಅವಕಾಶ ಪಡೆದಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕೆ ಗೌತಮ್ ಬದಲಿಗೆ ಮನೀಷ್ ಪಾಂಡೆ ಅವಕಾಶ ಪಡೆದಿದ್ದಾರೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್ (ಸಿ), ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್ mi-vs-lsg-26th-match-indian-premier-league