MI vs LSG | ರಾಹುಲ್ vs ರೋಹಿತ್ ಹೋರಾಟದಲ್ಲಿ ಗೆಲುವು ಯಾರಿಗೆ..?

1 min read
MI vs LSG Match preview ipl2022 saaksha tv

MI vs LSG | ರಾಹುಲ್ vs ರೋಹಿತ್ ಹೋರಾಟದಲ್ಲಿ ಗೆಲುವು ಯಾರಿಗೆ..?

ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಇಂದು ರೋರಾ ಹೊರಾಟ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ, ಕೆ.ಎಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿಗಾಗಿ ಗುದ್ದಾಟ ನಡೆಸಲಿವೆ. ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಇಂದು ಮಧ್ಯಾಹ್ನ 3:30ಕ್ಕೆ ಪಂದ್ಯ ನಡೆಯಲಿದೆ.

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈ ಆವೃತ್ತಿಯಲ್ಲಿ ಐದು ಪಂದ್ಯಗಳನ್ನಾಡಿದೆ. ಈ ಐದೂ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಬಳಗ ಸೋಲುಂಡಿದೆ.  ಸದ್ಯ ಮುಂಬೈ ಇಂಡಿಯನ್ಸ್ ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 12 ರನ್ ಗಳಿಂದ ಸೋಲು ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯಲು ಭಾರಿ ಕಸರತ್ತು ನಡೆಸಲಿದೆ.

ಅಂದಹಾಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಬೌಲಿಂಗ್ ದೊಡ್ಡ ಸಮಸ್ಯೆಯಾಗಿದ್ದು, ತಂಡದಲ್ಲಿ ಸಮತೋಲನ ಇಲ್ಲದಂತಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಖಚಿತ ಎಂದು ಅಂದಾಜಿಸಲಾಗಿದೆ. ಅರ್ಜುನ್ ತೆಂಡುಲ್ಕರ್ ಇಂದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡುವ ಸಾಧ್ಯತೆಗಳಿವೆ. ರೋಹಿತ್ ಶರ್ಮಾ, ಇಶಾನ್ ಇಶಾನ್, ಸೂರ್ಯಕುಮಾರ್, ಬುಮ್ರಾ ಮುಂಬೈ ತಂಡದ ಕೀ ಪ್ಲೇಯರ್ ಗಳಾಗಿದ್ದಾರೆ. ಆಲ್ ರೌಂಡರ್ ಕಿರಾನ್ ಪೋಲಾರ್ಡ್ ವೈಫಲ್ಯ ತಂಡಕ್ಕೆ ದೊಡ್ಡ ತಲೆನೋವಾಗಿದೆ.

mi vs lsg match prediction saaksha tv

ಇತ್ತ ಹೊಸ ತಂಡವಾಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಬಲಿಷ್ಠವಾಗಿ ಕಾಣಿಸುತ್ತಿದೆ. ಬ್ಯಾಟಿಂಗ್ ಬೌಲಿಂಗ್ ನಲ್ಲಿ ತಂಡ ಸಾಲಿಡ್ ಆಗಿದೆ. ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಟೂರ್ನಿಯಲ್ಲಿ ಐದು ಪಂದ್ಯಗಳನ್ನು ಆಡಿದೆ. ಇದರಲ್ಲಿ ಮೂರು ಪಂದ್ಯಗಳನ್ನು ಗೆದ್ದುಕೊಂಡಿದ್ದು, ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ.  ಲಕ್ನೋ ಸೂಪರ್ ಜೈಂಟ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ ಮೂರು ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿದೆ.   ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿ ಯಲ್ಲಿ ಸ್ಥಾನ ಭದ್ರ ಪಡಿಸಿಕೊಳ್ಳವ ತವಕದಲ್ಲಿದೆ.

ತಂಡದಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ. ಕೆ.ಎಲ್.ರಾಹುಲ್, ಡಿ ಕಾಕ್, ಆಯುಷ್ ಬಡೋನಿ, ಆವೇಶ್ ಖಾನ್, ಸ್ಟೋಯ್ನಿಸ್ ತಂಡದ ಕೀ ಪ್ಲೇಯರ್ ಗಳಾಗಿದ್ದಾರೆ.

 

ಒಟ್ಟಾರೆ ಇಂದಿನ ಪಂದ್ಯದಲ್ಲಿ ಎರಡೂ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದ್ದು, ಸದ್ಯದ ಫಾರ್ಮ್ ಪ್ರಕಾರ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲ್ಲುವ ನೆಚ್ಚಿನ ತಂಡವಾಗಿದೆ.

  mi vs lsg match prediction

 

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd