MI vs RCB WPL 2023 : ಹೇಲಿ ಮ್ಯಾಥ್ಯೂಸ್ ಆಲ್ರೌಂಡರ್ ಆಟಕ್ಕೆ ಶರಣಾದ RCB …
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸೋಮವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರು ಸತತವಾಗಿ ಎರಡನೇ ಬಾರಿಗೆ ಸೋಲು ಕಂಡಿದೆ. ಮುಂಬೈ ಇನ್ನೂ 34 ಎಸೆತಗಳು ಬಾಕಿ ಇರುವಾಗ 9 ವಿಕೆಟ್‌ಗಳಿಂದ ಭರ್ಜರಿ ಜಯ ದಾಖಲಿಸಿತು. 155 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಮುಂಬೈ 14.2 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಗೆಲುವು ಸಾಧಿಸಿತು.
ಮುಂಬೈ ಪರ ಆರಂಭಿಕ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ 38 ಎಸೆತಗಳಲ್ಲಿ 77 ರನ್ ಗಳಿಸಿ ಭರ್ಜರಿ ಅರ್ಧಶತಕ ಗಳಿಸಿದರು. ನಾಟ್ ಸ್ಕೀವರ್ ಕೂಡ ಅರ್ಧಶತಕ ಸಿಡಿಸಿದ್ದರು. 29 ಎಸೆತಗಳಲ್ಲಿ 55 ರನ್ ಗಳಿಸಿ ಔಟಾಗದೆ ಉಳಿದರು. ಮೊದಲು ಬೌಲಿಂಗ್ ನಲ್ಲಿ ಮಿಂಚಿದ್ದ ಹ್ಯಾಲಿ ನಂತರ ಬ್ಯಾಟಿಂಗ್ ನಲ್ಲಿ ಧೂಳೆಬ್ಬಿಸಿದರು. ಹ್ಯಾಲಿ 4 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಕಿತ್ತಿದ್ದರು.
ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 18.4 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಗಿತ್ತು. ಮತ್ತೊಮ್ಮೆ ಬ್ಯಾಟಿಂಗ್ ನಲ್ಲಿ ಸಾಂಘಿಕ ಪ್ರದರ್ಶನ ನೀಡುವಲ್ಲಿ ಆಟಗಾರ್ತಿಯರು ವಿಫಲರಾದರು.
MI vs RCB WPL 2023 : Hailey Mathews all-rounder surrenders to RCB…