ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರೋ ಸಂದರ್ಭದಲ್ಲೂ ಫೈನಾನ್ಸ್ ಸಂಸ್ಥೆಗಳಿಂದ ಸಾಲ ವಸೂಲಾತಿಗೆ ಯತ್ನ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಇಂದು ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರೊಂದಿಗೆ ಈ ವಿಚಾರವಾಗಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಹಿಳೆರು ಶಾಸಕರ ಬಳಿ ಸಮಸ್ಯೆ ಹೇಳಿಕೊಂಡಿದ್ದು, ಅಹವಾಲು ಸ್ವೀಕರಿಸಿ ಚಿಕ್ಕಮಾದು ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಇನ್ನೂ ಎರಡು ತಿಂಗಳು ಒತ್ತಡ ಹಾಕುವಂತಿಲ್ಲ ಎಂದು ಸೂಚಿಸಿದ್ದಾರೆ. ಅಲ್ದೇ ಆಧಾರ್ ಕಾರ್ಡ್ ಬ್ಲಾಕ್ ಮಾಡಿಸುವ ಬೆದರಿಕೆ ಹಾಕದಂತೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಈ ಬಗ್ಗೆ ಸಿಎಂ ಜೊತೆ ಮಾತನಾಡಿ ಸರ್ಕಾರದಿಂದಲೇ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಪತ್ರ ಬರೆಸುವ ಭರವಸೆ ನೀಡಿದ್ದಾರೆ.
ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ
ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...








