ಶ್ರೀನಗರ: ಸೇನಾ ವಾಹನ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.
ಜಮ್ಮು ಹಾಗೂ ಕಾಶ್ಮೀರದ (Jammu and Kashmir) ಅಖ್ನೂರ್ ನಲ್ಲಿ ಸೇನಾ ವಾಹನವನ್ನು (Army Vehicle) ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಉಗ್ರರು ಮೂರ್ನಾಲ್ಕು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡಿನ ದಾಳಿ ನಡೆಸಿದ ನಂತರ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಭದ್ರತಾ ಪಡೆಗಳು (Indian Army) ಸದ್ಯ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಯಾವುದೇ ಸಾವು- ನೋವಿನ ಕುರಿತು ವರದಿಯಾಗಿಲ್ಲ.








