ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಉಗ್ರರ ಬಾಂಬ್ ದಾಳಿ | 33 ಸಾವು
ಅಪಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ಮತ್ತೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ.
ನಿನ್ನೆ ಶುಕ್ರವಾರ ಏಪ್ರಿಲ್ 22 ರಂದು ಭಯೋತ್ಪಾದಕರು ಇಮಾಮ್ ಸಾಹಿಬ್ ಜಿಲ್ಲೆಯ ಮೌಲಾವಿ ಸಿಕಂದರ್ ಮಸೀದಿ ಮೇಲೆ ಬಾಂಬ್ ದಾಳಿ ಮಾಡಿದ್ದಾರೆ. ಸ್ಫೋಟದಲ್ಲಿ 33 ಜನರು ಸಾವನ್ನಪ್ಪಿದ್ದು, 45 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಮಕ್ಕಳೂ ಸೇರಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ತಿಳಿಸಿದ್ದಾರೆ. ದಾಳಿಯನ್ನು ಖಂಡಿಸಿದ ತಾಲಿಬಾನ್ ಸರ್ಕಾರ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅತಿದೊಡ್ಡ ದಾಳಿಗಳಲ್ಲಿ ಇದು ಒಂದಾಗಿದೆ ಎಂದು ನಿರೀಕ್ಷಿಸಲಾಗಿದೆ. ಇದೂ ಐಸಿಸ್ ಉಗ್ರರ ಕೈವಾಡ ಎಂಬ ಶಂಕೆ ವ್ಯಕ್ತವಾಗಿದೆ. ಅಫ್ಘಾನಿಸ್ತಾನದಲ್ಲಿ ಷಿಯಾ ಮತ್ತು ಸೂಫಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.