ಫಿಲಿಫೈನ್ಸ್ – ಸೇನಾ ವಿಮಾನ ಅಪಘಾತದಲ್ಲಿ 17 ಯೋಧರು ಸಾವು
ಫಿಲಿಫೈನ್ಸ್: ಫಿಲಿಪೀನ್ಸ್‌ನ ಸುಲು ಪ್ರಾಂತ್ಯದಲ್ಲಿ ಸೈನಿಕರನ್ನು ಕೊಂಡೊಯ್ಯುತ್ತಿದ್ದ ವಾಯುಪಡೆಯ ಸಿ–130 ವಿಮಾನವು ಅಪಘಾತಕ್ಕೀಡಾಗಿದ್ದು 17 ಯೋಧರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಸುಮಾರು 40 ಯೋಧರನ್ನು ರಕ್ಷಿಸಲಾಗಿದೆ ಎಂದು ಫಿಲಿಫೈನ್ಸ್ ನ ನಾ ಮುಖ್ಯಸ್ಥರು ತಿಳಿಸಿದರು. ಒಟ್ಟು 85 ಮಂದಿ ಯೋಧರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ವಿಮಾನವು ರನ್ ವೇಯಲ್ಲಿ ಇಳಿಯಬೇಕಾಗಿತ್ತು. ಆದರೆ ಅದು ಸಾಧ್ಯವಾಗದೆ, ಅಪಘಾತ ಸಂಭವಿಸಿದೆ. ವಿಮಾನದ ಭಗ್ನಾವಶೇಷಗಳಡಿ ಸಿಲುಕಿದ್ದ ಕನಿಷ್ಠ 40 ಮಂದಿಯನ್ನು ರಕ್ಷಿಸಲಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಸಿರಿಲಿಟೊ ಸೊಬೆಜಾನಾ ಹೇಳಿದ್ದಾರೆ. ಗಾಯಗೊಂಡಿದ್ದ ಸೈನಿಕರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.




![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)


