MILK PRODUCTIVITY CO OPERATIVE BANK | ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್
ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ
ಬಜೆಟ್‌ನಲ್ಲಿ ಘೋಷಣೆಯಾದ ಇಪ್ಪತ್ತು ದಿನಗಳಲ್ಲಿ ಆದೇಶ
ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸಿಎಂ ಆದೇಶ
ಭವಿಷ್ಯದಲ್ಲಿ 20 ಸಾವಿರ ಕೋಟಿ ವಾರ್ಷಿಕ ವಹಿವಾಟು ಗುರಿ
ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಹೈನುಗಾರಿಕೆ ಚಟುವಟಿಕೆಗಳಿಗೆ ನೆರವಾಗಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೆ ಸಾಲಿನ ಆಯವ್ಯಯದಲ್ಲಿ ಹೈನುಗಾರಿಕೆ ಚಟುವಟಿಕೆಗಳಿಗೆ ನೆರವಾಗಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸುವುದಾಗಿ ಪ್ರಕಟಿಸಿದ್ದರು.
ಈ ಯೋಜನೆಗೆ ಕರ್ನಾಟಕ ಹಾಲು ಮಹಾಮಂಡಳಿ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ಮತ್ತು ಸರ್ಕಾರ 100 ಕೋಟಿ ಷೇರು ಬಂಡವಾಳ ಒದಗಿಸಲಿದೆ ಎಂದು ಬಜೆಟ್‌ನಲ್ಲಿ ಘೋಷಿಸಿದ್ದರು.
ಅದರಂತೆ ಇದೀಗ ನೆರವಾಗಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಈ ಯೋಜನೆಯಡಿ ಪ್ರತಿ ತಾಲೂಕಿಗೆ ಒಂದು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸುವ ಗುರಿ ಹೊಂದಿದೆ. ಜೊತೆಗೆ ಭವಿಷ್ಯದಲ್ಲಿ 20 ಸಾವಿರ ಕೋಟಿ ವಾರ್ಷಿಕ ವಹಿವಾಟು ಗುರಿಯನ್ನು ಹೊಂದಲಾಗಿದೆ.
ಇನ್ನು ಸರ್ಕಾರದ ಆದೇಶದಲ್ಲಿ ಬ್ಯಾಂಕ್‌ಗಳಲ್ಲಿ ಹಾಲು ಉತ್ಪಾದಕರ ಸದಸ್ಯರು 1000 ರೂ. ಮುಖ ಬೆಲೆಯ ಕನಿಷ್ಠ 1 ಷೇರು ಹಾಗೂ ಹಾಲು ಉತ್ಪಾದಕರ ಸಂಘಗಳು ತಲಾ 10 ಸಾವಿರ ರೂ. ಮುಖಬೆಲೆಯ ಕನಿಷ್ಠ 1 ಷೇರು,
ಅದೇ ರೀತಿ ರಾಜ್ಯದ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳು 1 ಕೋಟಿ ಮೊತ್ತದ ಕನಿಷ್ಠ 1 ಷೇರು ಮತ್ತು ಕರ್ನಾಟಕ ಹಾಲು ಮಹಾಮಂಡಳ 50 ಕೋಟಿ ಮೊತ್ತದ ಕನಿಷ್ಠ 1 ಷೇರು ಬಂಡವಾಳ ಒದಗಿಸಬೇಕು ಎಂದು ಸೂಚಿಸಲಾಗಿದೆ.
MILK PRODUCTIVITY CO OPERATIVE BANK