ಚಿತ್ರದುರ್ಗ: ನಿರೀಕ್ಷೆಯಷ್ಟು ಜನ ಸೇರದ ಹಿನ್ನೆಲೆಯಲ್ಲಿ ಅವರಿಗಾಗಿ ತಯಾರಿಸಿದ್ದ ಚಿಕನ್ ಬಿರಿಯಾನಿಯನ್ನು ರಸ್ತೆಗೆ ಎಸೆದಿರುವ ಘಟನೆ ನಡೆದಿದೆ.
ಚಿತ್ರದುರ್ಗದಲ್ಲಿ ನಡೆದಿದ್ದ ಶೋಷಿತರ ಸಮಾವೇಶದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಕ್ವಿಂಟಾಲ್ ಗಟ್ಟಲೇ ಚಿಕನ್ ಬಿರಿಯಾನಿ (Chicken Biriyani)ಯನ್ನು ನೆಲದ ಮೇಲೆ ಎಸೆಯಲಾಗಿದೆ. ಕಾರ್ಯಕ್ರಮಕ್ಕೆ ನಿರೀಕ್ಷೆಯ ಜನರು ಬಾರದ ಹಿನ್ನೆಲೆಯಲ್ಲಿ ಉಳಿದ ಚಿಕನ್ ಬಿರಿಯಾನಿ ಹಾಗೂ ಪಲಾವ್ ಸಂಪೂರ್ಣವಾಗಿ ನೆಲದ ಪಾಲಾಗಿದೆ.
ಮೂರುವರೆ ಲಕ್ಷಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಅಷ್ಟು ಜನಕ್ಕೆ ಆಗುವಷ್ಟು ಬಿರಿಯಾನಿ ತಯಾರಿಸಲಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಆಗಮಿಸದ ಹಿನ್ನಲೆಯಲ್ಲಿ ಕೆಲವು ಆಹಾರ ಸಾಮಗ್ರಿಗಳನ್ನು ಆಯೋಜಕರು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಅನ್ನ, ಚಿಕನ್ ಎಲ್ಲವನ್ನು ನೆಲಕ್ಕೆ ಹಾಕಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಯೋಜಕರ ಕ್ರಮಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.