ನವದೆಹಲಿ: ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ದೆಹಲಿ ಗಲಭೆಯನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ ಎರಡೂ ಸದನಗಳ ಕಲಾಪವನ್ನು ಮತ್ತೆ ಮುಂದೂಡಲಾಗಿದೆ.
ಲೋಕಸಭೆಯಲ್ಲಿ ಇಂದು ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ದೆಹಲಿ ಗಲಭೆ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದರಿಂದ ಸದನದಲ್ಲಿ ಗದ್ದಲ ಸೃಷ್ಟಿ ಆಯಿತು. ಈ ಕೋಲಾಹಲದ ನಡುವೆ ಖನಿಜ ಕಾನೂನು ಮಸೂದೆ ಅಂಗೀಕಾರಗೊಂಡಿದ್ದು, ಕಲಾಪವನ್ನು ಮಾರ್ಚ್ 11ಕ್ಕೆ ಮುಂದೂಡಲಾಗಿದೆ. ಈ ಮಸೂದೆಯಲ್ಲಿ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ, 1957 ಮತ್ತು ಕಲ್ಲಿದ್ದಲು ಗಣಿಗಾರಿಕೆ (ವಿಶೇಷ ನಿಬಂಧನೆಗಳು)ಕಾಯ್ದೆಗೆ ತಿದ್ದುಪಡಿಗಳನ್ನು ತರಲಾಗಿದೆ. ಕಲ್ಲಿದ್ದಲು ಗಣಿ ಹರಾಜಿನಲ್ಲಿ ಭಾಗವಹಿಸುವುದಕ್ಕೆ ನಿರ್ಬಂಧಗಳನ್ನು ತೆಗೆದುಹಾಕಲು ಮಸೂದೆ ಪ್ರಸ್ತಾಪಿಸಿದೆ ಮತ್ತು ಇದು ಎಲ್ಲಾ ದೇಶೀಯ ಮತ್ತು ಜಾಗತಿಕ ಕಂಪನಿಗಳಿಗೆ ವಾಣಿಜ್ಯ ಗಣಿಗಾರಿಕೆಗಾಗಿ ಕಲ್ಲಿದ್ದಲು ವಲಯವನ್ನು ಸಂಪೂರ್ಣವಾಗಿ ಮುಕ್ತಗೊಳಿಸುತ್ತದೆ.
ಜಲಾಶಯದಿಂದ ನೀರು ಸೋರಿಕೆ: ರೈತರಲ್ಲಿ ಭಯದ ವಾತಾವರಣ
ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಲ್ಲಿ ಗಂಭೀರ ಪರಿಸ್ಥಿತಿ ಉದ್ಭವಿಸಿದ್ದು, ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಈ ಸ್ಥಿತಿಯಿಂದ ಜಲಾಶಯದ ನೀರಿನ ಮೇಲೆ ಅವಲಂಬಿತರಾಗಿರುವ ರೈತರಲ್ಲಿ ಭಾರೀ ಆತಂಕ ಉಂಟಾಗಿದೆ....