ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಿಗೆ, ಉಪ ಪ್ರಾಂಶುಪಾಲರಿಗೆ ಕನಿಷ್ಟ 12 ಅವಧಿ ಬೋಧನೆ ಕಡ್ಡಾಯ
ಬೆಂಗಳೂರು, ಫೆಬ್ರವರಿ04: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಿಗೆ, ಉಪ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ವಾರದಲ್ಲಿ ಕಡ್ಡಾಯವಾಗಿ ಕನಿಷ್ಟ 12 ಅವಧಿ ಬೋಧಿಸುವಂತೆ ಆದೇಶ ಹೊರಡಿಸಿದೆ.
ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕರು ಮತ್ತು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪ ಪ್ರಾಂಶುಪಾಲರು ವಾರದಲ್ಲಿ ಕಡ್ಡಾಯವಾಗಿ ಕನಿಷ್ಟ 12 ಅವಧಿ ಬೋಧಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಶಿಕ್ಷಣ ಇಲಾಖೆಯು, ರಾಜ್ಯಾದ್ಯಂತ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಗುಣ ಮಟ್ಟದ ಶಿಕ್ಷಣ ಒದಗಿಸುವುದು ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ. ಹಾಗಾಗಿ ಶಿಕ್ಷಕರು ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಶ್ರಮವಹಿಸಬೇಕು ಎಂದು ಹೇಳಿದೆ.
ಮಾಜಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ನಿಧನ
ಸರ್ಕಾರದ ಆದೇಶದಂತೆ ಪ್ರತಿಯೊಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರುಗಳು ಪ್ರತಿವಾರ 12 ಅವಧಿಗಳ ಬೋಧನೆಯನ್ನು ಕಡ್ಡಾಯವಾಗಿ ಮಾಡತಕ್ಕದ್ದು. ತರಗತಿ ತೆಗೆದುಕೊಂಡ ವರದಿಯನ್ನು ಪ್ರತಿ ತಿಂಗಳು ತಮ್ಮ ವ್ಯಾಪ್ತಿಯ ಬಿಇಒ ಮತ್ತು ಬಿ ಆರ್ ಸಿ ಗಳಿಗೆ ಕಳುಹಿಸಿಕೊಡತಕ್ಕದ್ದು ಎಂದು ವಿ.ಅನ್ಬುಕುಮಾರ್ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರು ಈಗಾಗಲೇ ಆದೇಶ ಹೊರಡಿಸಿದ್ದಾರೆ.

ಈ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಮತ್ತು ಫಲಿತಾಂಶವು ಉತ್ತಮವಾಗಿರುತ್ತದೆ ಎಂದು ಅನ್ಬುಕುಮಾರ್ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1356996556046491650?s=19
https://twitter.com/SaakshaTv/status/1356996818500874241?s=19








