ಔರಾದ್ಕಕರ್ ವರದಿ ಅನುಷ್ಠಾನದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳಿಗೆ ತೊಂದರೆ
ತುಮಕೂರು : ಔರಾದ್ಕಕರ್ ವರದಿ ಅನುಷ್ಠಾನದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳಿಗೆ ತೊಂದರೆಯಾಗಿದ್ದು, ಅದನ್ನು ಸರಿಪಡಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ ಅವರು, ಈ ಮೇಲಿನ ಹೇಳಿಕೆ ನೀಡಿದರು.
ಇದೇ ವೇಳೆ ನೀಟ್ ಪರೀಕ್ಷೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಕುರಿತು ಸಂಬಂಧಿಸಿದ ಸಚಿವರು ಮತ್ತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಪ್ರತಿಕ್ರಿಯಿಸಲಿದ್ದಾರೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಸಚಿವರು ನಗರದ ಬಿ.ಎಚ್. ರಸ್ತೆಯ ಭದ್ರಮ್ಮ ವೃತ್ತದ ಎನ್.ಇ,ಪಿ,ಎಸ್ ಪೊಲೀಸ್ ಠಾಣೆಯ ನೂತನ ಕಟ್ಡಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. minister araga gnanedra press meet tumakur