CET 2022 – ಜುಲೈ 30ಕ್ಕೆ ಫಲಿತಾಂಶ ನಿಗದಿಪಡಿಸಿದ ಉನ್ನತ ಶಿಕ್ಷಣ ಸಚಿವರು
ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದಾ CET 2022 ರ ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2022ರ ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು. CET ಬರೆದಿದ್ದ CBSE, ICSE ವಿದ್ಯಾರ್ಥಿಗಳು KEA ವೆಬ್‌ಸೈಟ್ ನಲ್ಲಿ ತಮ್ಮ ಅಂಕಗಳನ್ನು ಜು.26ರೊಳಗೆ ಅಪ್ಲೋಡ್ ಮಾಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಜೂ.16 ಮತ್ತು 17 ರಂದು ಸಿಇಟಿ ಹಾಗೂ 18 ರಂದು ಹೊರನಾಡು ಹಾಗೂ ಗಡಿಭಾಗದ ಕನ್ನಡಿಗರಿಗಾಗಿ ಪರೀಕ್ಷೆ ನಡೆಸಲಾಗಿತ್ತು. ನೋಂದಣಿ ಮಾಡಿಕೊಂಡಿರುವ ಒಟ್ಟು 2,16,559 ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕ್ರಮವಾಗಿ ಶೇ. 80.95 & 96.06 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
KCET2022 ಫಲಿತಾಂಶ https://cetonline.karnataka.gov.in/kea/ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.








