Minister BC Nagesh | ಸರ್ಕಾರಿ ಶಾಲಾ ಮಕ್ಕಳಿಂದ 100 ರೂ. ಸಂಗ್ರಹ : ಸಚಿವರು ಹೇಳಿದ್ದೇನು ?
ಬೆಂಗಳೂರು : ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಅಭಿವೃದ್ಧಿ ವೆಚ್ಚಕ್ಕಾಗಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರಿಂದ ದಾನ, ದೇಣಿಗೆ ರೂಪದಲ್ಲಿ ಎಸ್ ಡಿಎಂಸಿಗಳ ಮೂಲಕ ಮಾಸಿಕ ತಲಾ 100 ರೂಪಾಯಿ ಗಣ ಸಂಗ್ರಹಕ್ಕೆ ಅವಕಾಶ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿದ್ದು, ಈ ಸುತ್ತೋಲೆ ವಿಷಯದಲ್ಲಿ ಶಿಕ್ಷಣ ಮಂತ್ರಿಗಾಗಲಿ, ಮುಖ್ಯಮಂತ್ರಿಗಳಾಗಳಿ ಸಂಬಂಧವಿಲ್ಲ. ಸುತ್ತೋಲೆ ದುರುಪಯೋಗವಾದರೆ ಹಿಂಪಡೆಯಲಾಗುವುದು ಎಂದು ಸ್ಪಷ್ಪಡಿಸಿದರು.
ಸಿದ್ದರಾಮಯ್ಯ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ಸಿ.ಪಾಟೀಲ್, ಶಾಲೆಯ ಅಭಿವೃದ್ಧಿಗೆ ಸ್ಥಳೀಯವಾಗಿ ಹಣ ಸಂಗ್ರಹಿಸಲು ಆರ್ ಟಿಇ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಇದನ್ನ ಜಾರಿಗೆ ತಂದವರು ಸಿದ್ದರಾಮಯ್ಯ ಅವರ ಸರ್ಕಾರದವರು. ಎಲ್ಲಿಯೂ ಪೋಷಕರು ಕಡ್ಡಾಯವಾಗಿ ಹಣ ಕೊಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿಲ್ಲ.
ಸ್ವಯಂ ಪ್ರೇರಿತರಾಗಿ ಕೊಟ್ಟರೆ ತಿಂಗಳಿಗೆ 100 ರುಪಾಯಿವರೆಗೆ ಪಡೆದು ರಶೀದಿ ಕೊಡಬೇಕು.
ಆದ್ರೆ ದೇಶದಲ್ಲಿ ಕಾನೂನು ಪಂಡಿತ ಎನಿಸಿಕೊಂಡ ಸಿದ್ದರಾಮಯ್ಯ ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.