ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ತಲುಪಿಸಲು ಬಿಸಿಪಾ ಸೂಚನೆ

1 min read
Minister B C patil Sowing seed Bangalore saaksha tv

Minister B C patil Sowing seed Bangalore saaksha tv

ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ತಲುಪಿಸಲು ಬಿಸಿಪಾ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು ಸಕಾಲದಲ್ಲಿ ರೈತರಿಗೆ ಇವುಗಳನ್ನು ತಲುಪಿಸಲು ಮಾನ್ಯ ಕೃಷಿ ಸ ಚಿವರಾದ  ಬಿ.ಸಿ. ಪಾಟೀಲ್ ಅವರು ತಿಳಿಸಿದರು.

 ಮಾನ್ಯ ಸಚಿವರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 13.05.2022 ರಂದು ಜರಗಿದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಗಾರ ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಕ್ರಮ ವಹಿಸಲುಅಧಿಕಾರಿಗಳಿಗೆ ಸೂಚಿಸಿದರು .

 ಕೃಷಿ ಇಲಾಖೆಯ ಕಾರ್ಯದರ್ಶಿಗಳಾದ  ಶಿವಯೋಗಿ ಕಳಸದ, ಅವರು ಕೃಷಿ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ಸರ್ಕಾರದ ಹಂತದಲ್ಲಿ ಅನುದಾನ ಸಕಾಲಕ್ಕೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ರೈತರಿಗೆ ಇಲಾಖೆ ಕಾರ್ಯಕ್ರಮಗಳನ್ನು ತಲುಪಿಸುವ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ವಹಿಸಬೇಕೆಂದು ತಿಳಿಸಿದರು .

Minister B C patil Sowing seed Bangalore   saaksha tv
Minister B C patil Sowing seed Bangalore saaksha tv

 ಕೃಷಿ ಆಯುಕ್ತರಾದ ಬ್ರಿಜೇಶ್ ಕುಮಾರ್ ದಿಕ್ಷಿತ್ ರವರು ಮಾತನಾಡಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಬೆಳೆ ಸಮೀಕ್ಷೆಯನ್ನು ರೈತರೇ ಹೆಚ್ಚಾಗಿ ಮಾಡುವಂತೆ ಪ್ರೋತ್ಸಾಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಜಲಾನಯನ ಇಲಾಖೆ ಆಯುಕ್ತರಾದ ವೆಂಕಟೇಶ್ ರವರು ಮಾತನಾಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

 ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕೃಷಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ನಂದಿನಿ ಕುಮಾರಿ ಅವರು ಗಣ್ಯರನ್ನು ಸ್ವಾಗತಿಸಿದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ  ರಾಜೇಂದ್ರಪ್ರಸಾದ್, ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಕೃಷಿ ಇಲಾಖೆಯ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕೊನೆಯದಾಗಿ ಬಿ. ಶಿವರಾಜು, ಅಪರ ಕೃಷಿ ನಿರ್ದೇಶಕರು (ಬೆಳೆ ಅಭಿವೃದ್ಧಿ ಮತ್ತು ಯೋಜನೆ) ರವರು ವಂದನಾರ್ಪಣೆ ಮಾಡಿದರು. Minister B C patil Sowing seed Bangalore

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd