ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಸಚಿವ ಬಿ.ಸಿ.ಪಾಟೀಲ್ ಸಂತಾಪ Oscar Fernandes
ಬೆಂಗಳೂರು : ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡೀಸ್ ಅವರು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ.
ಶ್ರೀಯುತರ ಅಗಲಿಕೆ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣಕ್ಕಾಗದ ನಷ್ಟವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಬಿ.ಸಿ.ಪಾಟೀಲ್ ತಮ್ಮ ಶೋಕ ಸಂತಾಪದಲ್ಲಿ ವ್ಯಕ್ತಪಡಿಸಿದ್ದಾರೆ.