B Sriramulu | ಜನ ಆರ್ ಟಿಒ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ
ಬೆಂಗಳೂರು : ಆರ್ ಟಿಒ ಕಚೇರಿಗಳಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರಲಾಗಿದೆ. ಹೀಗಾಗಿ ಸಾರ್ವಜನಿಕರು ಆರ್ ಟಿ ಒ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಕಲಾಪದಲ್ಲಿ ಮಾತನಾಡಿದ ಬಿ.ಶ್ರೀರಾಮುಲು, ರಾಜ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿ – ಆರ್ ಟಿಒ ಕಚೇರಿಗಳಲ್ಲಿ ಕಾಗದರಹಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ವಾಹನ ಚಾಲನಾ ಪರವಾನಗಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಆನ್ ಲೈನ್ ಮೂಲಕ ಪಡೆಯಬಹುದಾಗಿದೆ.
ಹೀಗಾಗಿ ಇನ್ಮುಂದೆ ಸಾರ್ವಜನಿಕರು ಆರ್ ಟಿಒ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ಹೇಳಿದರು.
ಅಲ್ಲದೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಮತ್ತು ಸಿಂಧನೂರು ಪಟ್ಟಣದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ತೆರೆಯುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
ಅದೇ ರೀತಿ ಸಿಂಧನೂರಿನಲ್ಲೂ ಕಚೇರಿ ತೆರೆಯುವಂತೆ ಬೇಡಿಕೆ ಬಂದಿದ್ದು, ಈ ಬಗ್ಗೆಯೂ ಅನುದಾನದ ಲಭ್ಯತೆ ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
minister B Sriramulu says paperless system at RTO offices









