Minister BC Nagesh | ಶಾಲಾಭಿವೃದ್ಧಿಗೆ ಪೋಷಕರಿಂದ ದೇಣಿಗೆ ಸಂಗ್ರಹ ಆದೇಶ ವಾಪಾಸ್
ಬೆಂಗಳೂರು : ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂದೆ ಪಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅಗತ್ಯವಿರುವ ಖರ್ಚುವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪ್ರತಿ ತಿಂಗಳು 100 ರೂಪಾಯಿ ಸಂಗ್ರಹಿಸಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ಅನುಮತಿ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಇದಕ್ಕೆ ವಿಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಶನಿವಾರ ಮೈಸೂರಿನಲ್ಲಿ ಸುದ್ದಿಗಾರಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ಈ ಆದೇಶ ಹೊರಡಿಸಿಲ್ಲ. S D M C ಸಲಹೆ ಮೇರೆಗೆ ಹಿಂದಿನ ಸರ್ಕಾರ ಈ ಸುತ್ತೋಲೆ ಹೊರಡಿಸಿತ್ತು. ಶಾಲಾಭಿವೃದ್ಧಿ ಸಂಬಂಧ ಈ ರೀತಿಯ ಸುತ್ತೋಲೆ ಹೊರಡಿಸಲು ಆಯುಕ್ತರಿಗೆ ಅಧಿಕಾರವಿದೆ. ಅಲ್ಲದೆ, ವಿದ್ಯಾರ್ಥಿಗಳು ಮತ್ತು ಪೋಷಕರು ದೇಣಿಗೆ ನೀಡುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದರು.