ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜೀಯಿಲ್ಲ

Mahesh M Dhandu by Mahesh M Dhandu
January 21, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜೀಯಿಲ್ಲ

ಬೆಂಗಳೂರು : ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪೆನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ ಮುಲಾಜೂ ಇಲ್ಲ.ರೈತರ ಕಾಳಜಿಯೇ ಮುಖ್ಯವಾದ ಗುರಿಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ಸ್ಪಷ್ಟಪಡಿಸಿದ್ದಾರೆ.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ರಾಜ್ಯದ ಕೃಷಿ ಸಚಿವರು ಇಲಾಖಾಧಿಕಾರಿಗಳೊಂದಿಗೆ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಕೇಂದ್ರ ಸಚಿವರು ಅವಲೋಕನಾ ಸಭೆ ನಡೆಸಿ,ಸರ್ಕಾರಿ ಇನ್ಸೂರೆನ್ಸ್ ಕಂಪೆನಿಗಳು ಸರಿಯಾದ ಸಮಯಕ್ಕೆ ರೈತರಿಗೆ ಬೆಳೆ ವಿಮೆ ಪರಿಹಾರ ನೀಡಬೇಕೆಂಬ ನಿಟ್ಟಿನಲ್ಲಿ ಚರ್ಚಿಸಿದರು.
ಅವಲೋಕನಾ ಸಭೆಯಲ್ಲಿ ಸರ್ಕಾರಿ ವಿಮಾ ಕಂಪೆನಿಗಗಳಿಂದ ಸರಿಯಾದ ಸಮಯಕ್ಕೆ ಸರಿಯಾಗಿ ರೈತರಿಗೆ ಬೆಳೆ ವಿಮೆ ನೀಡಲು ಸಾಧ್ಯವಾಗುತ್ತದೆ ಎಂದ ಮೇಲೆ ಖಾಸಗಿ ವಿಮಾ ಕಂಪೆನಿಗಳಿಗೆ ಸರಿಯಾಗಿ ರೈತರಿಗೆ ವಿಮೆ ಪಾವತಿಸಲು ಸಾಧ್ಯವಾಗದೇ ಇರುವುದನ್ನು ಗಮನಿಸಿದ ಸಚಿವದ್ವಯರು ಸಭೆಯಲ್ಲಿ ಖಾಸಗಿ ವಿಮಾ ಕಂಪೆನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇವಲ ಅಂಕಿಅಂಶಗಳಿಂದ ಕಾಗದದ ಮೇಲಿನ ಅಂಕಿಸಂಖ್ಯೆಗಳಿಂದ ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸರ್ಕಾರಿ ವಿಮಾ ಕಂಪೆನಿಗಳು ಸರಿಯಾಗಿ ನ್ಯಾಯ ಒದಗಿಸುತ್ತಿವೆ. ಖಾಸಗಿ ಕಂಪೆನಿಗಳು ಕೇವಲ ಅಂಕಿಸಂಖ್ಯೆಗಳನ್ನು ಮಾತ್ರ ಅಧಿಕಾರಿಗಳಿಗೆ ತೋರಿಸುತ್ತಿವೆ.ಈ ಹಿಂದೆಯೇ ರೈತ ಸಂಪರ್ಕ ಕೇಂದ್ರಗಳಲ್ಲಿ ವಿಮಾ ಕಂಪೆನಿಗಳು ಕಚೇರಿಗಳನ್ನು ತೆರೆಯಬೇಕೆಂದು ಸೂಚಿಸಲಾಗಿತ್ತು.ಆದರೆ ಅದು ಬರೀ ಸೂಚನೆಯಾಗಿಯಷ್ಟೇ ಉಳಿದಿದ್ದು,ಕಾರ್ಯಗತವಾಗಿಲ್ಲ ಎಂಬುದನ್ನು ಸಭೆಯಲ್ಲಿ ಕಮಿಷನರ್ ಗಮನಕ್ಕೆ ತಂದ ಕೃಷಿ ಸಚಿವ ಬಿ.ಸಿ.ಪಾಟೀಲ್, ಈ ಬಗ್ಗೆ ಕೃಷಿ ಕೇಂದ್ರ ಇಲಾಖೆಯ ಪ್ರಮುಖರು ಗಮನ ಹರಿಸಿ ಹದಿನೈದು ದಿನದೊಳಗೆ ಎಲ್ಲಾ ವಿಮಾ ಕಂಪೆನಿಗಳಿಗೆ ತಾಕೀತು ಮಾಡುವಂತೆ ಹೇಳಿದರು.

Minister Bhagwant Khooba meet b c patil  saaksha tv

ರೈತರ ಪರವಾಗಿ ಅಧಿಕಾರಿಗಳು ಇರಬೇಕು.ಜಿಲ್ಲೆಯ ಕೃಷಿ ಅಧಿಕಾರಿಗಳಲ್ಲಿ ಪರಸ್ಪರ ಸಮನ್ವಯತೆ ಇರಬೇಕು. ವಿಮಾ ಇಲಾಖೆಯಲ್ಲಿ ಬೆಳೆ ವಿಮೆಗೆ ನೋಂದಣಿಯಾಗಿರುವ ಜಿಲ್ಲಾವಾರು ಪ್ರದೇಶ, ಬೆಳೆಗಳ ಬಗ್ಗೆ ರೈತರ ಮಾಹಿತಿ ಪಡೆದು ಸಾಂಖ್ಯಿಕ ಇಲಾಖೆಯ ಅಂಕಿಅಂಶಗಳ ಜೊತೆ ಪರಿಶೀಲನೆ ಮಾಡಿ ಒಂದು ವಾರದೊಳಗೆ ವರದಿ ಮಾಹಿತಿ ನೀಡಬೇಕು ಎಂದು ಆಯುಕ್ತರಿಗೆ ಭಗವಂತ್ ಖೂಬಾ ಸೂಚಿಸಿದರು.

ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರ ಸಚಿವ ಭಗವಂತ್ ಖೂಬಾಗೆ “ಬೆಲೆ
ಭದ್ರತೆ” ಬಗ್ಗೆ ಮನವಿ ಸಲ್ಲಿಸಿದರು. ಸದ್ಯ ರಾಜ್ಯದಲ್ಲಿ 6.12 ಲಕ್ಷ ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬರ ದಾಸ್ತಾನಿದ್ದು,2022 ರ ಮುಂಗಾರಿಗೆ 26.5 ಲಕ್ಷ ಟನ್ ಬೇಡಿಕೆಯಿರುವುದಾಗಿ ಅಂದಾಜಿಸಲಾಗಿದೆ. ಅಗತ್ಯವಿರುವ ರಸಗೊಬ್ಬರದ ಸರಬರಾಜು ಹಾಗೂ 3ಲಕ್ಷ ಟನ್ ವಿವಿಧ ರಸಗೊ ಬ್ಬರಗಳನ್ನು ಕಾಪು ದಾಸ್ತಾನಾಗಿ ಶೇಕರಣೆ ಮಾಡಲು ನಿರ್ಧರಿಸಲಾಗಿರುವುದರಿಂದ ಮುಂದಿನ ದಿನಗಳಲ್ಲಿ ಆಗಬಹುದಾದ ಬೆಲೆ ಏರಿಳಿತಕ್ಕೆ ರಕ್ಷಣೆ ನೀಡಲು ಮನವಿ ಪತ್ರದಲ್ಲಿ ಹೇಳಲಾಗಿದೆ.

Tags: #Saaksha TVB C Patilbangalorekarnataka
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram