ಸಚಿವ ಡಿ.ವಿ.ಸದಾನಂದ ಗೌಡ ಆಸ್ಪತ್ರೆಗೆ ದಾಖಲು
ಚಿತ್ರದುರ್ಗ, ಜನವರಿ03: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಕ್ಕರೆ ಮಟ್ಟ ಕಡಿಮೆಯಾದ ಆದ ಹಿನ್ನಲೆಯಲ್ಲಿ ಚಿತ್ರದುರ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರ್ಯಕ್ರಮ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಶುಗರ್ ಲೋ ಆಗಿದೆ. ಕೂಡಲೇ ಅವರನ್ನು ಹತ್ತಿರದಲ್ಲಿದ್ದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಡಿವಿಎಸ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ತಿಳಿಸಿದೆ. ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಮುಗಿಸಿ ವಾಪಸಾಗುವ ವೇಳೆ ಸಕ್ಕರೆ ಮಟ್ಟ ಕಡಿಮೆ ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿವ ಡಿ.ವಿ.ಸದಾನಂದ ಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ ಎಂದು ಹೇಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಹಲ್ಲುನೋವಿಗೆ ಪರಿಣಾಮಕಾರಿ ಮನೆಮದ್ದುಗಳುhttps://t.co/HhYDoJETEb
— Saaksha TV (@SaakshaTv) December 31, 2020
ಜನವರಿ 1ರಿಂದ ಬದಲಾದ ರೈಲು ಟಿಕೆಟ್ ಕಾಯ್ದಿರಿಸುವ ವಿಧಾನ https://t.co/VytpPCKmxG
— Saaksha TV (@SaakshaTv) January 2, 2021