ರಾಜಿನಾಮೆಗು ಮುನ್ನ ಸಿದ್ದಗಂಗಾ ಮಠಕ್ಕೆ ತೆರಳಲಿರುವ ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ : ಸಚಿವ ಕೆ ಎಸ್ ಈಶ್ವರಪ್ಪ ಅವರು ಇಂದು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದು, ಅದಕ್ಕೂ ಮೊದಲು ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳ ಆಶಿರ್ವಾದ ಪಡೆಯಲಿದ್ದಾರೆ.
ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಲ್ಲಿ ಇಂದು ಸಂಜೆ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ. ಈ ಮುನ್ನ ತಮ್ಮ ನಿವಾಸದಲ್ಲಿರುವ ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ನಂತರ ನಗರದಲ್ಲಿ ನಡೆಯುವ ಕನಕದಾಸ ಸೇವಾ ಟ್ರಸ್ಟ್ನಿಂದ ನಿರ್ಮಾಣವಾಗಿರುವ ಶುಭಶ್ರೀ ಸಮುದಾಯ ಭವನ ಲೋಕಾರ್ಪಣೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಅಲ್ಲದೇ ಸಂಜೆ ವೇಳೆಗೆ ಸಿದ್ದಗಂಗಾ ಮಠಕ್ಕೆ ತೆರಳಿ ಸ್ವಾಮೀಜಿಗಳ ಆಶೀರ್ವಾದ ಪಡೆದು ಬೆಂಗಳೂರಿಗೆ ತೆರಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ ಬಳಿಕ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.