ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಇಂದು ಬೆಂಗಳೂರು ಹೊರವಲಯ ನೆಲಮಂಗಲ ಬಸ್ ನಿಲ್ದಾಣದ ಹಿಂಭಾಗದ ಪಡಿತರ ಅಂಗಡಿಗೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳಿಗೆ ಬೆವರಿಸಿಳಿಸಿದ್ದಾರೆ. ಪ್ರತಿಯೊಬ್ಬರಿಗೂ ಸಮವಾಗಿ ಪಡಿತರ ನೀಡಬೇಕು. ಆಹಾರ ಮತ್ತು ನಾಗರಿಕ ಪೂರೈಕೆಯಲ್ಲಿ ವ್ಯತ್ಯಾಸವಾದರೆ ಸರಿ ಇರುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಅಲ್ಲದೇ ಸಚಿವರ ಮುಂದೆ ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ನಂತರ ಸ್ವತಃ ತಾವೇ ಬೇಳೆಯ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಹಾಗೇ ಆಧಾರ್ ಕಾರ್ಡ್ ಅನುಗುಣವಾಗಿ ಆಹಾರ ಪೂರೈಕೆ ಮಾಡಿ ಮತ್ತು ಯೂನಿಟ್ ಆಧಾರದಲ್ಲಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವರು ಖಡಕ್ ಎಚ್ಚರಿಕೆ ನೀಡಿದರು.








