ರಾಜ್ಯಾದ್ಯಂತ ಕಳೆದೆರೆಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಕರಾವಳಿ , ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಗೆ ನದಿಗಳು ಮೈದುಂಬಿ ಹರಿಯುತ್ತಿದ್ದು ಅನೇಕರಲ್ಲಿ ಸಂತಸ ಮೂಡಿಸಿದ್ರೆ, ಕೆಲವೆಡೆ ನೆರೆ ಆತಂಕ ಸೃಷ್ಟಿಯಾಗಿದೆ. ಈ ವಿಚಾರವಾಗಿ ವೈದ್ಯಕೀಯ ಶಿಕ್ಷಣ ಸಚಿ ಡಾ. ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
“ದೇವರ ಕೃಪೆಯಿಂದ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಕೊರೊನಾ ಸೋಂಕಿನ ಮಧ್ಯೆ ಮಳೆಯಾಗುತ್ತಿದ್ದು, ಜನರು ಅತ್ಯಂತ ಜಾಗೃತೆವಹಿಸಿ. ಜ್ವರ, ಕೆಮ್ಮು, ನೆಗಡಿ, ಶೀತ ಮತ್ತಿತರೇ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕರೆ ಮಾಡಿ” ಎಂದಿದ್ದಾರೆ.








