ಉಡುಪಿ: ಪುಲಿಕೇಶಿ ನಗರದಲ್ಲಿ ಹಿಂಸಾಚಾರ ಪ್ರಕರಣವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಅಕ್ಷರಸಹ ಅಪರಾಧ. ಸಾರ್ವಜನಿಕ ಆಸ್ತಿ ನಷ್ಟಕ್ಕೆ ಕಠಿಣ ಶಿಕ್ಷೆ ಆಗಬೇಕಿದೆ. ಪೊಲೀಸ್ ಠಾಣೆಯ ಪೀಠೋಪಕರಣ ಧ್ವಂಸ ಮಾಡಿದ್ದು ಶಿಕ್ಷಾರ್ಹ ಅಪರಾಧ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಿರ್ದಾಕ್ಷಿಣ್ಯ ಕ್ರಮಕ್ಕೆ ಆದೇಶಿಸಿದ್ದಾರೆ. ಸಿಎಂ ಅವರ ಆದೇಶವನ್ನು ಸ್ವಾಗತ ಮಾಡುತ್ತೇನೆ. ಅಭಿಪ್ರಾಯ ಭೇದ ಇದ್ದರೆ ಮುಕ್ತವಾಗಿ ಚರ್ಚೆಗೆ ಅವಕಾಶ ಇದೆ. ಪುಂಡಾಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇಂತಹ ಪುಂಡಾಟಿಕೆ ರಾಜ್ಯದಲ್ಲಿ ನಡೆಯಬಾರದು. ಸಿಎಂ ಹಾಗೂ ಗೃಹಸಚಿವರ ಕ್ರಮವನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಉಡುಪಿಯಲ್ಲಿ ಶ್ರೀನಿವಾಸ್ ಪೂಜಾರಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.








