ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೋವಿಡ್ ಸೋಂಕು

1 min read
Minister Kota Srinivas Poojary car accident

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೋವಿಡ್ ಸೋಂಕು

ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕಿತ್ಸೆಗಾಗಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯ ಸಂದರ್ಭವಿದ್ದರೆ, ನೀವು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು. ಕಳೆದ ಎರಡು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲಾ ಆರ್‍ ಟಿ ಪಿಸಿಆರ್ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ ಸಚಿವರು ಏಪ್ರಿಲ್ 8 ಗುರುವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ನಡೆದ ಧರ್ಮ ನೇಮೋತ್ಸವದಲ್ಲಿ ಭಾಗವಹಿಸಿದ್ದರು.
Minister Kota Srinivas Poojary car accident

ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರಿಗೆ ಕೋವಿಡ್ ತಗುಲಿರುವುದು ವರದಿಯಿಂದ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

#kotashrinivaspoojary #covidpositive

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd