ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೋವಿಡ್ ಸೋಂಕು
ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕಿತ್ಸೆಗಾಗಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯ ಸಂದರ್ಭವಿದ್ದರೆ, ನೀವು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು. ಕಳೆದ ಎರಡು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲಾ ಆರ್ ಟಿ ಪಿಸಿಆರ್ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ ಸಚಿವರು ಏಪ್ರಿಲ್ 8 ಗುರುವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ನಡೆದ ಧರ್ಮ ನೇಮೋತ್ಸವದಲ್ಲಿ ಭಾಗವಹಿಸಿದ್ದರು.
ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರಿಗೆ ಕೋವಿಡ್ ತಗುಲಿರುವುದು ವರದಿಯಿಂದ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಕಿಡ್ನಿ ಸ್ಟೋನ್ ಸಮಸ್ಯೆಗೆ ಬೀಟ್ರೂಟ್ ನ ಮನೆಮದ್ದುhttps://t.co/eee6aOjFG0
— Saaksha TV (@SaakshaTv) April 8, 2021
ಉರಿಬಿಸಿಲಿಗೆ ತಂಪಾದ ಬೂದು ಕುಂಬಳಕಾಯಿ ಜ್ಯೂಸ್https://t.co/trQ50Lcaki
— Saaksha TV (@SaakshaTv) April 8, 2021
ಸ್ಮಾರ್ಟ್ಫೋನ್ ಬಳಸುವವರು ವಹಿಸಬೇಕಾದ ಮುನ್ನೆಚ್ಚರಿಕೆಗಳುhttps://t.co/GlDX34UUhx
— Saaksha TV (@SaakshaTv) April 9, 2021
ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಶಿಕ್ಷಕಿಯ ಸ್ವಂತ ದುಡಿಮೆಯ ಹಣದಿಂದ ಠೇವಣಿ ಯೋಜನೆhttps://t.co/tGfDRpL0ly
— Saaksha TV (@SaakshaTv) April 9, 2021
#kotashrinivaspoojary #covidpositive