ಸರಕಾರಿ ಬಸ್ ಮತ್ತು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಾರಿನ ನಡುವೆ ಡಿಕ್ಕಿ
ಬಿಡದಿ, ಫೆಬ್ರವರಿ19: ಸರಕಾರಿ ಬಸ್ ಮತ್ತು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಸಚಿವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಸರಕಾರಿ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಸಚಿವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಬೆಂಗಳೂರಿನ ಹೊರವಲಯದ ನೈಸ್ ರಸ್ತೆ ಬಳಿಯ ಕದಂಬ ಹೋಟೆಲ್ ಬಳಿ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಸಾರ್ಟಿಸ್ ಬಸ್ ಡಿಕ್ಕಿ ಹೊಡೆದಿದೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಮತ್ತು ಚಾಲಕ ಅಪಾಯವಿಲ್ಲದೇ ಪಾರಾಗಿದ್ದಾರೆ.
ಬಿಡದಿ ಬಳಿಯ ನೈಸ್ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಕಾರನ್ನು ತಿರುಗಿಸಿದ್ದಾಗ ಈ ಘಟನೆ ಸಂಭವಿಸಿದೆ. ಕೆಎಸ್ಸಾರ್ಟಿಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡ ಸಚಿವರನ್ನು ಮತ್ತು ಕಾರು ಚಾಲಕನನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.