ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಮಾಜಿ ಸಚಿವ ಯು.ಟಿ ಖಾದರ್ ಅವರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವಿಟ್ಟರ್ ನಲ್ಲಿ ತಿರುಗೇಟು ಕೊಟ್ಟಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್ ನಲ್ಲಿ.. “ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ಕುಟುಕಿದ್ದಾರೆ.
ಇದೇ ವೇಳೆ ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲಿ ಖಾದರ್ ಭಾಗಿಯಾಗಿದ್ದ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ” ಕರೋನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರ ಜಿಲ್ಲಾಡಳಿತ ಕೋರಿದೆ. ದುರಾದೃಷ್ಟಕ್ಕೆ, ಶವಸಂಸ್ಕಾರದ ಹೆಸರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ವಿಪಕ್ಷದ ಜನಪ್ರತಿನಿಧಿಗಳಿಗೆ ಶೋಭೆಯಲ್ಲ ” ಬರೆದುಕೊಂಡಿದ್ದಾರೆ.








