ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯ ಸಾಲಮನ್ನಾ ಕುರಿತು ಕೃಷಿ ಸಚಿವ ಬಿ.ಸಿ ಪಾಟೀಲ್ ನೀಡಿದ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ಕೃಷಿ ಸಚಿವರೇ ನಾಲಿಗೆ ಇದೆ ಅಂತ ತೆವಲಿಗೆ ಮಾತನಾಡಬೇಡಿ. ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ ಎಂದು ಬಿ.ಸಿ.ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ‘ಬಿ.ಸಿ ಪಾಟೀಲ್‌ಗೆ ಸಾಲ ಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ. ಸಾಲಮನ್ನಾದ ಬಗ್ಗೆ ಆ ಕೃಷಿ ಸಚಿವರಿಗೆ ವಿಷಯವೇ ಗೊತ್ತಿಲ್ಲ ಅನ್ಸತ್ತೆ. ನಾನು ಅಧಿಕಾರದಿಂದ ಇಳಿಯುವಾಗ ಬರಿ ಘೋಷಣೆ ಮಾಡಿಲ್ಲ. ಬದಲಿಗೆ 25 ಸಾವಿರ ಕೋಟಿ ಹಣ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ’ ಎಂದರು.