ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ರಾಜ್ಯಸಭೆ ಪ್ರವೇಶ ಮಾಡುವುದು ಬಹುತೇಕ ಖಚಿತವಾಗಿದೆ. ಹಾಗಾಗಿ ವೈಧ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ದೇವೇಗೌಡ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವ್ಯಂಗ್ಯಭರಿತ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗು ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಒಳ್ಳೆಯ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.







