ಪಶುಸಂಗೋಪನೆ ಇಲಾಖೆ ನನ್ನ ಕುಟುಂಬ, ಸಮಸ್ಯೆಗಳನ್ನು ಆಲಿಸಲು ಸದಾ ಸಿದ್ಧ : ಸಚಿವ ಪ್ರಭು ಚವ್ಹಾಣ್
ಕೊಡಗು: ಪಶುಸಂಗೋಪನೆ ಇಲಾಖೆ ನನ್ನ ಪರಿವಾರ ಇದ್ದಂತೆ. ಕುಟುಂಬದ ಪ್ರಮುಖನಾಗಿ ನಾನು ನಿಮ್ಮ ಸಮಸ್ಯೆಗಳನ್ನು ಆಲಿಸಲು ಸದಾ ಸಿದ್ಧ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಕೊಡಗಿನಲ್ಲಿ ಹೇಳಿದ್ದಾರೆ.
ಆಹಾರ ಸಚಿವರಿಗೆ ಪರಿಜ್ಞಾನ ಇಲ್ಲ : ಹೆಚ್.ಡಿ.ಕುಮಾರಸ್ವಾಮಿ
ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು ಇಲಾಖೆಯ ಸಮಸ್ಯೆಗೆ ಸ್ಪಂದಿಸಲು ನಾನು ಸದಾ ಸಿದ್ಧನಿದ್ದೇನೆ. ಆದರೆ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದಿದ್ದಾರೆ.
#GOBackModi ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ‘ಕಿರಾತಕ ಬೆಡಗಿ’ ಓವಿಯ್ಯಾ!
ಇನ್ನೂ ಇದೇ ವೇಳೆ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಮೊದಲು ನಮ್ಮ ಅಧಿಕಾರಿಗಳು ಅಧ್ಯಯನ ಮಾಡಬೇಕು ಇಲ್ಲವಾದರೆ ಗೋಹತ್ಯೆ ಪರಿಣಾಮಕಾರಿಯಾಗಿ ನಿರ್ವಹೆಣೆ ಮಾಡಲು ಸಮಸ್ಯೆ ಆಗುತ್ತದೆ ಎಂದು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇದೇ ವೇಳೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಕೋವಿಡ್ ನಿಂದಾಗಿ ಸ್ವಲ್ಪ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಖಾಲಿ ಹುದ್ದೆ ಭರ್ತಿಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮತ್ತೊಬ್ಬ ಬಾಲಿವುಡ್ ನ ಯುವ ನಟ ಆತ್ಮಹತ್ಯೆಗೆ ಶರಣು..!
ಅಲ್ಲದೇ ಗೋಹತ್ಯೆ ನಿಷೇಧ ಜಾರಿಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಒಂದು ಗೋವು ಸಹ ಕಸಾಯಿಖಾನೆಗೆ ಹೋಗದಂತೆ ನೋಡಿಕೊಳ್ಳಿ ಎಂದು ಸಚಿವರು ಅಧಿಕಾಗಳಿಗೆ ಸೂಚನೆ ನೀಡಿದರು.








