Karwar: ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ಸಚಿವರು
1 min read
ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ಸಚಿವರು
ಕಾರವಾರ: ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಅಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಸಚಿವರು, ಸದ್ಯ ಶುಕ್ರವಾರ ಕಂದಾಯ ಸಚಿವ ಆರ್. ಅಶೋಕ್ ಇತರೆ ಮೂವರು ಸಚಿವರು ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಗ್ರಾಮಕ್ಕೆ ಆಗಮಿಸಿದ ಸಚಿವರನ್ನು ಹಳ್ಳಿಯ ಜನರು ಆರತಿ ಬೆಳಗಿ ಅದ್ದೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ, ಕಂದಾಯ ಸಚಿವ ಆರ್. ಅಶೋಕ್ ಅವರು ಕಳೆದ 50 ವರ್ಷಗಳಿಂದ ಇಲ್ಲಿನ ಜನರು ಸರ್ಕಾರದ ವಿವಿಧ ಸೌಲಭ್ಯಗಳಿಗಾಗಿ ವಿವಿಧ ಇಲಾಖೆಗಳು, ಜಿಲ್ಲಾಧಿಕಾರಿ ಕಚೇರಿಗೆ ಅಲೆಯುತ್ತಲೇ ಇದ್ದಾರೆ. ಅವರರಿಗೆ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಮುಂದುವರೆದು ಇದೇ ಕಾರಣಕ್ಕೆ ರಾಜ್ಯಾದ್ಯಂತ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡಿ ಸಮಸ್ಯೆ ಬಗೆಹರಿಸಲಾಗುತ್ತಿದೆ. ಈಗಾಗಲೇ ಐದು ಗ್ರಾಮ ವಾಸ್ತವ್ಯ ಮುಗಿಸಿ ಇದೀಗ 6ನೇ ಗ್ರಾಮ ವಾಸ್ತವ್ಯ ಮಾಡಲಾಗುತ್ತಿದೆ. ಈವರೆಗೆ 99 ಸಾವಿರ ಅರ್ಜಿಗಳು ಬಂದಿದ್ದು, ಕಂದಾಯ ಇಲಾಖೆಯಿಂದ ಎಲ್ಲಾ ಅರ್ಜಿಗಳ ವಿಲೇವಾರಿಯಾಗಿದೆ ಎಂದು ತಿಳಿಸಿದರು.
ಇನ್ನೂ ವಿಧವಾ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನರಿಗೆ ಸಾಧನಗಳು, ರೈತ ಆತ್ಮಹತ್ಯೆ ಪರಿಹಾರ ಸೇರಿದಂತೆ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳಿಗೆ ಸಚಿವರಿಂದಲೇ ಸೌಲಭ್ಯವನ್ನ ವಿತರಣೆ ಮಾಡಲಾಯಿತು.
ಸಚಿವ ಶಿವರಾಂ ಹೆಬ್ಚಾರ ಅವರು ಮಾತನಾಡಿ ನಗರ ಪ್ರದೇಶದಲ್ಲಿ ಕಂದಾಯ ಭೂಮಿ ಅತಿಕ್ರಮಣ ಮಾಡಿ ಮನೆ ಕಟ್ಟಿಕೊಂಡಿದ್ದ ಬಡವರಿಗೆ 94 C ಹಾಗೂ ಗ್ರಾಮೀಣ ಪ್ರದೇಶದಲ್ಲಿ 94 CC ಅಡಿಯಲ್ಲಿ ಜಾಗ ಒದಗಿಸಿಕೊಟ್ಟಿದ್ದು, ಜಿಲ್ಲೆಯಲ್ಲೇ 3 ಸಾವಿರಕ್ಕೂ ಅಧಿಕ ಮಂದಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.