ಚಿಕ್ಕೋಡಿ (ಬೆಳಗಾವಿ): ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ರೈತರ ಕೆಂಗಣ್ಣಿಗೆ ಗುರಿಯಾಗದ್ದಾರೆ.
ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ರೀತಿ ಹೇಳಿಕೆ ನೀಡಿದ್ದಾರೆ. ಹಿಂದೆಯಷ್ಟೇ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಿರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ನೀಡಿದ್ದಾರೆ. ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಗುತ್ತೆ ಎಂದು ಎಂದು ಹೇಳಿಕೆ ನೀಡಿದ್ದಾರೆ.