ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗ್ತಿರುವ ಪರಿಣಾಮ ಬೆಳಗಾವಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ನದಿ ಪಾತ್ರದ ಗ್ರಾಮಸ್ಥರಲ್ಲಿ ನೆರೆ ಆತಂಕ ಎದುರಾಗಿದೆ. ದಿನ ನಿತ್ಯ ಪ್ರವಾಹದ ಆತಂಕದಲ್ಲಿ ಕಾಲ ಕಳೆಯುತ್ತಿರುವ ಗ್ರಾಮಸ್ಥರಿಗೆ ಧೈರ್ಯ ತುಂಬಲು ನದಿ ಪಾತ್ರದ ಗ್ರಾಮಗಳಿಗೆ ಸಚಿವ ಶ್ರೀಮಂತ ಪಾಟೀಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಗವಾಡ ತಾಲೂಕಿನ ನದಿ ತೀರದ ಗ್ರಾಮಗಳಾದ ಕುಸುನಾಳ ಹಾಗೂ ಮೊಳವಾಡ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ದ ಜವಳಿ ಸಚಿವರಾದ ಶ್ರೀಮಂತ ಪಾಟೀಲ ಪ್ರವಾಹ ಪರಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಪ್ರವಾಹ ಪರಸ್ಥಿತಿ ಎದುರಾದರೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ವೇಳೆ ಸಚಿವರು ತಾವೇ ಬೋಟ್ ನಲ್ಲಿ ಸಂಚರಿಸುವ ಮೂಲಕ ನದಿ ಪ್ರವಾಹ ಮಟ್ಟದ ಕುರಿತು ಅವಲೋಕಸಿದ ಸಚಿವರು ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ ಈ ವರ್ಷ ಪ್ರವಾಹ ಪರಸ್ಥಿತಿ ಎದುರಾಗುವ ಲಕ್ಷಣಗಳು ಇಲ್ಲ ಮಾಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಅಲ್ಲಿ ಬಿಳುತ್ತೀರುವ ಮಳೆಯ ಬಗ್ಗೆ ಮಾಹಿತಿ ಪಡೆದುಕೋಳ್ಳುತ್ತಿದ್ದನೆ. ಇನ್ನು ಕೊಯ್ನಾ ಡ್ಯಾಂ ಜಲಾಶಯ ಭರ್ತಿ ಆಗಲು 30 ಟಿಎಂಸಿ ನೀರು ಬೇಕು ವಾರಣಾ ಡ್ಯಾಂ ಕೂಡಾ ಇನ್ನು ತುಂಬಿಲ್ಲಾ ಈಗಾಗಲೇ ಕೃಷ್ಣಾ ನದಿ ನೀರು ಒಂದು ಫೂಟ್ ವರೆಗೆ ಇಳಿದಿದೆ. ಒಂದು ವೇಳೆ ಪ್ರವಾಹ ಬಂದರೂ ಮುನ್ನೆಚ್ಚರಿಕೆಯಾಗಿ ನಮ್ಮ ಅಧಿಕಾರಿಗಳು ನದಿ ತೀರದಲ್ಲಿ 24 ಘಂಟೆ ಕಾಲ ಕೆಲಸ ಮಾಡುತ್ತಿದ್ದಾರೆ ಇಲ್ಲಿನ ಜನರು ಭಯ ಪಡುವ ಅವಶ್ಯಕತೆ ಇಲ್ಲಾ ಈಗಾಗಲೇ ಕಾಗವಾಡ ತಾಲೂಕಿನಲ್ಲಿ ಎರಡ್ಮೂರು ಹಳ್ಳಿಗಳನ್ನ ಹೊರತು ಪಡಿಸಿದರೆ ಎಲ್ಲಾ ನದಿ ತೀರದ ಗ್ರಾಮಗಳಲ್ಲಿ ಬೋಟ್ ನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದ್ರು.
ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...








