ಕೊರೊನಾ ಹೆಮ್ಮಾರಿ ಯಾರನ್ನೂ ಬಿಟ್ಟಿಲ್ಲ. ಬಡವರು ಶ್ರೀಮಂತರು, ರಾಜಕಾರಣಿಗಳು ಸಿನೆಮಾ ತಾರೆಯರಿಗೂ ಕೊರೊನಾ ಕಂಟಕ ಕಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಸಿಎಂ ಯಡಿಯೂರಪ್ಪ , ವಿಪಕ್ಷ ನಾಯಕ ಸಿದ್ದರಾಮಯ್ಯರಿಗೂ ಸೋಂಕು ತಗುಲಿದ್ದು, ಇದರ ಬೆನ್ನಲ್ಲೇ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು
“ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಕೊರೊನಾ ದೃಢಪಟ್ಟಿರುವ ವಿಷಯ ತಿಳಿದು ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಅವರು ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಚಾಮುಂಡೇಶ್ವರಿ ದೇವಿಗೆ ಪ್ರಾರ್ಥಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.
ಇನ್ನೂ ಈಗಾಗಲೇ ಜಿ.ಟಿ ದೇವೇಗೌಡ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತಾಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ರು. “ನಾನು ಕೊರೊನಾ ಟೆಸ್ಟ್ಗೆ ಒಳಗಾಗಿದ್ದೆ. ಕೋವಿಡ್ ಪಾಸಿಟಿವ್ ಇರುವುದಾಗಿ ರಿಪೋರ್ಟ್ ಬಂದಿದೆ” ಎಂದು ತಿಳಿಸಿದ್ದರು.








