ಬೆಂಗಳೂರು: ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಎರಡು ದಿನಗಳ ಹಿಂದಷ್ಟೇ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು.
ಡಿಕೆಶಿ ಅವರ ವಿಕ್ಟೋರಿಯಾ ಆಸ್ಪತ್ರೆ ಭೇಟಿಗೆ ವೈದ್ಯಕೀಯ ಶಿಕ್ಷಣ ಸಚಿವ ಢಾ. ಸುಧಾಕರ್ ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ನಾನು ಕನಿಷ್ಠ 12 ಸಂಬರ್ಭದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಯಗಳನ್ನು ಪರಿಶೀಲಿಸಿ, ಸೋಂಕಿತರಿಗೆ ಧೈರ್ಯ ತುಂಬುವ, ವೈದ್ಯರು ಹಾಗೂ ಸಿಬ್ಬಂದಿಗಳನ್ನು ಬೆನ್ನು ತಟ್ಟುವ ಕೆಲಸ ಮಾಡಿದ್ದೇನೆ. ತಾವು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಎಷ್ಟು ಬಾರಿ ಭೇಟಿ ನೀಡಿದ್ದೀರಿ ಎಂದು ನೆನಪಿಸಿಕೊಳ್ಳಿ ಎಂದು ಸುಧಾಕರ್ ತಿರುಗೇಟು ನೀಡಿದ್ದಾರೆ.

ಡಿಕೆಶಿ ಪ್ರಚಾರಕ್ಕಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂಬ ಅರ್ಥದಲ್ಲಿ ಕನಕಪುರ ಬಂಡೆಗೆ ಸುಧಾಕರ್ ಡಿಚ್ಚಿ ಕೊಟ್ಟಿದ್ದಾರೆ.
ಮತ್ತೊಂದು ಟ್ವಿಟರ್ನಲ್ಲಿ ನಾನು ಸಚಿವನಾದ ಬಳಿಕ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿಗೆ 7ನೇ ವೇತನ ಆಯೋಗದ ಅನ್ವಯ ವೇತನ ಪರಿಷ್ಕರಣೆ, ಯುಜಿ, ಪಿಜಿ ವಿದ್ಯಾರ್ಥಿಗಳ ಶಿಷ್ಯವೇತನ ಶೇ.30ರಿಂದ 50ರಷ್ಟು ಹೆಚ್ಚಳ ಸೇರಿದಂತೆ ಕಾಲೇಜುಗಳ ಎಲ್ಲಾ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದೇನೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಸಮರ್ಪಕ ನಿರ್ವಹಣೆಯ ಬಗ್ಗೆ ನನಗೆ ತೃಪ್ತಿಯಿದೆ ಎಂದು ಹೇಳಿಕೊಳ್ಳುವ ಮೂಲಕ ಡಿಕೆಶಿಗೆ ಮತ್ತೊಮ್ಮೆ ತಿರುಗೇಟು ನೀಡಿದ್ದಾರೆ.









