ಇಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನಾಯಕರಾಗಿರುವ ಜಿ. ಪರಮೇಶ್ವರ್ ಅವರ ಜನ್ಮದಿನ. ಪರಮೇ.ಶ್ವರ್ ಅವರ ಜನ್ಮದಿನದ ಪ್ರಯುಕ್ತ ಹಲವಾರು ರಾಜಕೀಯ ಗಣ್ಯರು ಹಾಗೂ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣಗಳ ಮೂಲಕ ಹುಟ್ಟುಹಬ್ಬದ ಶೂಭಾಷಯಗಳನ್ನು ಕೋರುತ್ತಿದ್ದಾರೆ. ಅದರಂತೆ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್ ಅವರು ಟ್ವೀಟ್ ಮೂಲಕ ಪರಮೇಶ್ವರ್ ಅವರಿಗೆ ಜನ್ಮದಿನದ ಶುಭಹಾರೈಸಿದ್ದಾರೆ.
“ಆತ್ಮೀಯರು, ಹಿರಿಯ ನಾಯಕರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಇನ್ನಷ್ಟು ದೀರ್ಘಕಾಲ ನಾಡಿನ ಜನತೆಯ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸುಧಾಕರ್ ಅವರು ವಿಷ್ ಮಾಡಿದ್ದಾರೆ.








