ಸಚಿವ ಸುಧಾಕರ್ ತಂದೆಗೆ ಅನಾರೋಗ್ಯ; ಅಡುಗೆ ಕೆಲಸದವನಿಗೂ ಕೊರೊನಾ..!
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ತಂದೆ ಕೇಶವರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಡಾ.ಸುಧಾಕರ್ ತಂದೆ ಕೇಶವರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಕಾರ್ಯನಿರ್ವಹಿಸುತ್ತಿದ್ದಾರೆ. 82 ವರ್ಷದವರಾದ ಕೇಶವರೆಡ್ಡಿಗೆ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರೂ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ ಎಂದು ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ.
ಅಡುಗೆ ಕೆಲಸದವನಿಗೂ ಕೊರೊನಾ ಪಾಸಿಟಿವ್
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಅಡುಗೆ ಕೆಲಸದವನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಡುಗೆ ಕೆಲದವನಿಗೆ ಕೊರೊನಾ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ನಡೆಸಿದ ತುರ್ತು ಸಭೆಗೂ ಡಾ.ಸುಧಾಕರ್ ಗೈರು ಹಾಜರಾಗಿದ್ದರು.








