Minister V Somanna | ಬಡವರ ಮಕ್ಕಳು ಬಡವರಾಗಿರಬಾರದು
ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಯಂಡಹಳ್ಳಿ ವಾರ್ಡ್ ಗೆ ಸೇರಿದ ಗಂಗೊಂಡನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಶಂಕುಸ್ಥಾಪನೆಯನ್ನು ಸಚಿವ ವಿ.ಸೋಮಣ್ಣ ರವರು ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಹಿಂದೂ, ಮುಸಲ್ಮಾನ್, ಕ್ರಿಶ್ಚಿಯನ್ ಎಲ್ಲರೂ ಈ ನಾಡಿನ ಮಕ್ಕಳಾಗಿ ಒಗ್ಗಟ್ಟಿನಿಂದ ಇದ್ದೇವೆ.
ಇನ್ನೂ 5 ತಿಂಗಳಲ್ಲಿ ಈ ಸಮುದಾಯ ಭವನವನ್ನು ನಿರ್ಮಿಸುತ್ತೇವೆ, ಒಂದು ಆಸ್ಪತ್ರೆಯನ್ನು ಸಹ ನಿರ್ಮಿಸುತ್ತೇವೆ ಭರವಸೆ ನೀಡಿದ್ರು.
ಈಗಾಗಲೇ ಈ ಭಾಗದಲ್ಲಿ ನಾಲ್ಕು ಅಂಗನವಾಡಿಗಳ ವ್ಯವಸ್ಥೆ ಮಾಡಲಾಗಿದೆ. ನಿಮ್ಮ ಮನೆಯ ಹೆಣ್ಣುಮಕ್ಕಳೇ ಅಂಗನವಾಡಿ ಶಿಕ್ಷಕಿಯರಾಗಿ ಕಾರ್ಯನಿರ್ವಹಿಸಲಿ.
ಹೈಸ್ಕೂಲ್ ವ್ಯವಸ್ಥೆಯನ್ನು ಕಲ್ಪಿಸಿ ಕೊಡುತ್ತೇವೆ, ಆಂಗ್ಲ ಮಾಧ್ಯಮ ವ್ಯವಸ್ಥೆಯನ್ನು ಮುಂದಿನ ವರ್ಷ ಕಲ್ಪಿಸಲಾಗುವುದು ಎಂದು ಭರವಸೆಯನ್ನು ನೀಡಿದರು.

ಕರ್ನಾಟಕ ರಾಜ್ಯದಲ್ಲಿ 3,41,000 ಕುಟುಂಬಗಳಿಗೆ 8,600 ಎಕರೆಗೂ ಮೇಲ್ಪಟ್ಟು ಜಾಗವನ್ನು ಮೀಸಲಾಗಿಟಿದ್ದೇವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಬಡವರಿಗಾಗಿ ಬೆಂಗಳೂರಿನಲ್ಲಿ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ, ಈಗಾಗಲೇ 52,000 ಸಜ್ಜಾಗಿವೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿದ್ಯಾಸಿರಿ ಯೋಜನೆ ಜಾರಿಗೆ ಬಂದಿದೆ.
ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗಬಾರದು. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಇದ್ದರೆ ನನ್ನ ಗಮನಕ್ಕೆ ತನ್ನಿ. ಬಡವರು ಬಡವರಾಗಿರಬಾರದು, ಬಡವರ ಮಕ್ಕಳು ಬಡವರಾಗಿರಬಾರದು ಎಂದರು.
ಈ ಸಂದರ್ಭದಲ್ಲಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಮುಸ್ಲಿಂ ಮುಖಂಡರು, ವಾರ್ಡಿನ ಮಸೀದಿಗಳ ಮೌಲ್ವಿಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.








