ಅಭಿವೃದ್ಧಿ ಗಮನಿಸಿ ಸಿಂದಗಿಯಲ್ಲಿ ಬಿಜೆಪಿಗೆ ಜನಬೆಂಬಲ : ಸಚಿವ ವಿ.ಸೋಮಣ್ಣ V. Somanna saaksha tv
ಬೆಂಗಳೂರು : ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಸಿಂದಗಿಯಲ್ಲಿ ಬಿಜೆಪಿಗೆ ಜನರು ನಿರೀಕ್ಷೆಗೂ ಮೀರಿ ಬೆಂಬಲ ನೀಡಿದ್ದಾರೆ.
ಮುಸ್ಲಿಮರೂ ನಮಗೆ ಹೆಚ್ಚು ಮತ ಕೊಟ್ಟಿದ್ದಾರೆ ಎಂದು ವಸತಿ ಮತ್ತು ಮೂಲಸೌಲಭ್ಯ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯದ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ಕ್ಷೇತ್ರಗಳನ್ನು ಗೆಲ್ಲುವ ತವಕದಲ್ಲಿದ್ದೆವು.
ಸಣ್ಣ ಅಂತರದಿಂದ ಹಾನಗಲ್ ಕ್ಷೇತ್ರವನ್ನು ನಾವು ಸೋತಿದ್ದೇವೆ. ಹಾನಗಲ್ ಕ್ಷೇತ್ರದಲ್ಲಿ ಶ್ರೀನಿವಾಸ ಮಾನೆ ಅವರ ವೈಯಕ್ತಿಕ ಗೆಲುವು.
ಅವರ ವರ್ಚಸ್ಸಿನ ಗೆಲುವು ಇದಾಗಿದೆ. ಅದು ಕಾಂಗ್ರೆಸ್ ಗೆಲುವಲ್ಲ ಎಂದಿದ್ದಾರೆ. ಇನ್ನು, ಸಿಂದಗಿಯಲ್ಲಿ ಎಲ್ಲ ಸಚಿವರು, ಶಾಸಕರು, ಕಾರ್ಯಕರ್ತರು ಒಂದೇ ತಂಡವಾಗಿ ಕೆಲಸ ಮಾಡಿದ್ದೇವೆ.
ಕ್ಷೇತ್ರದ ಮತದಾರ ಪ್ರಭುಗಳು ಅಭಿವೃದ್ಧಿಗಾಗಿ ಬಿಜೆಪಿಗೆ ಮಣೆ ಹಾಕಿದ್ದಾರೆ ಎಂದಿದ್ದಾರೆ.
ರಾಜ್ಯ ವಕ್ತಾರರು ಮತ್ತು ಶಾಸಕರಾದ ಪಿ. ರಾಜೀವ್, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.









