Minister V Somanna-ಚಾಮರಾಜನಗರ : ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರುವಂತಹ ಘಟನ ನಿನ್ನೆ ಸಂಜೆ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
ಈ ಕಾರ್ಯಕ್ರಮವು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಕಾರಣಾಂತರದಿಂದ ಸಚಿವರು ಸಂಜೆ 6:30 ಕ್ಕೆ ಆಗಮಿಸಿದರು
ಈ ಸಂದರ್ಭದಲ್ಲಿ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿತ್ತು . ಇದರ ಮಧ್ಯೆ ನಿವೇಶನ ಕುರಿತು ತನ್ನ ಸಮಸ್ಯೆ ಹೇಳಿಕೊಳ್ಳಲು ಮಹಿಳೆಯೋಬ್ಬಳು ಸಚಿವರ ಬಳಿ ಬಂದಿದ್ದಳು .
ನೂಕು ನುಗ್ಗಲಿನಿಂದ ಬೇಸತ್ತ ಸಚಿವ ವಿ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನಿನ್ನೆ ಸಂಜೆ ನಡೆದಿದೆ.
ನಂತರ ಪೊಲೀಸರು ಘಟನೆ ನಂತರ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ.








