Ministry of External Affairs: ಪಾಕ್ ನ ಹನಿ ಟ್ರ್ಯಾಪ್ ಜಾಲಕ್ಕೆ ಬಿದ್ದಿದ್ದ ವಿದೇಶಾಂಗ ಸಚಿವಾಲಯದ ಸಿಬ್ಬಂದಿ ಅರೆಸ್ಟ್
ನೆರೆಯ ಪಾಕಿಸ್ತಾನಕ್ಕೆ ದೇಶದ ಗೌಪ್ಯ ಮಾಹಿತಿಯನ್ನು ರವಾನಿಸಿದ ವಿದೇಶಾಂಗ ಸಚಿವಾಲಯದ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹನಿ ಟ್ರ್ಯಾಪ್ ಜಾಲದಲ್ಲಿ ಬಿದ್ದು, ಪಾಕಿಸ್ತಾನಕ್ಕೆ ಗೌಪ್ಯ ಮತ್ತು ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನದ ಐಎಸ್‌ಐಗೆ ಸೇರಿದ ಮಹಿಳೆಯ ಹನಿ ಟ್ರ್ಯಾಪ್ ಜಾಲದಲ್ಲಿ ಬಿದ್ದಿದ್ದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಚಾಲಕ ದೇಶದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಪೊಲೀಸರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಚಾಲಕನನ್ನು ಭದ್ರತಾ ಏಜೆನ್ಸಿಗಳ ಸಹಾಯದಿಂದ ಬಂಧಿಸಿದ್ದು, ಚಾಲಕನ ಹೆಸರು ಮತ್ತು ವಿವರಗಳನ್ನು ಬಹಿರಂಗ ಪಡಿಸಿಲ್ಲ.
ministry-of-external-affairs-the-personnel-of-the-ministry-of-external-affairs-who-fell-into-the-honey-trap-network-of-pakistan-was-arrested