ಚಿಕ್ಕಪ್ಪನ ಮಗಳ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ : ಬಾಲಕಿ ಗರ್ಭಿಣಿ
ದಾವಣಗೆರೆ : ಬಾಲಕನೋರ್ವ ತನ್ನ ಚಿಕ್ಕಪ್ಪನ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆತೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
15 ವರ್ಷದ ಬಾಲಕಿ ಮೇಲೆ, ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿದ್ದು, ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಸದ್ಯ ಬಾಲಕಿಯನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬಾಲಕನ ಮೇಲೆ ಹೊನ್ನಾಳಿ ಪೆÇಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.